• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜನರಲ್ಲಿ ವಿಶ್ವಾಸ ಮೂಡಿಸದೆ, ಕಠಿಣ ಕ್ರಮಗಳನ್ನು ಕೈಗೊಂಡರೆ ಏನು ಪ್ರಯೋಜನ: ಎಚ್ಡಿಕೆ ಪ್ರಶ್ನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಲಿ: ಎಚ್ಡಿಕೆ ಆಗ್ರಹ
0
SHARES
0
VIEWS
Share on FacebookShare on Twitter

ಬೆಂಗಳೂರು, ಏ. 21: ರಾಜ್ಯ ಸರ್ಕಾರ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಜತೆಗೆ ಜನರ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸುವ ಮೂಲಕ ಜನರಲ್ಲಿ ವಿಶ್ವಾಸ ತುಂಬಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೋವಿಡ್‌ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್‌ ಸಭೆಗಳನ್ನು ಮಾಡಿದೆ, ವಿರೋಧ ಪಕ್ಷದ ನಾಯಕರ ಸಲಹೆ ಪಡೆದಿದೆ. ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಸರ್ಕಾರ ಮಾತಾಡಬೇಕು.

ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ?

ಕೋವಿಡ್‌ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈ ವರೆಗೆ ಏನು ಮಾಡಿಕೊಂಡಿತ್ತು? ಕೋವಿಡ್‌ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದ ವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನಾಗಿದ್ದವು?

ಕೋವಿಡ್‌ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಪರಿಕರಗಳ ಅಭಾವದ ಬಗ್ಗೆ ನಾನು ಈಗಾಗಲೇ ಮಾತಾಡಿದ್ದೇನೆ. ಎಚ್ಚರಿಕೆಯನ್ನೂ ನೀಡಿದ್ದೇನೆ. ಇದರ ಬಗ್ಗೆ ಏನು ಕ್ರಮ ಕೈಗೊಂಡಿದೆ ಸರ್ಕಾರ? ಚಿಕಿತ್ಸೆಯೇ ದುರ್ಬರವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಹಂತದಲ್ಲಿ ಕುಗ್ಗಿ ಹೋಗಿರುವ ಜನರಲ್ಲಿ ವಿಶ್ವಾಸ ಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆಯೇ?

ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್‌ಡಿಸಿವಿರ್‌ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ? ಇದನ್ನು ಮೊದಲು ಹೇಳಲಿ.

ಒಂದೆಡೆ ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಆರೋಗ್ಯ ಸೇವೆ ಒದಗಿಸಲಾಗದ ಸರ್ಕಾರದ ದೈನೇಸಿ ಸ್ಥಿತಿಯ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಲ್ಲವೇ? ಜನರ ರಕ್ಷಣೆಗಾಗಿ ಮಾಡಿಕೊಂಡಿರುವ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರ್ಕಾರ ಹೇಳಬೇಕಲ್ಲವೇ?

‘ಜನರನ್ನು ಯಾವುದೇ ಹಂತದಲ್ಲಿ ಸರ್ಕಾರ ರಕ್ಷಣೆ ಮಾಡುತ್ತದೆ. ಅವರ ಜೀವಕ್ಕೆ ಆಧಾರವಾಗಿರುತ್ತದೆ,’ ಎಂಬ ವಿಶ್ವಾಸವನ್ನು ತುಂಬುವುದು ಅಗತ್ಯ. ಅದು ಬಿಟ್ಟು ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡರೂ ಅದು ನಗಣ್ಯ. ಈ ವಿಷಯವನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಕೊರತೆ ನೀಗಿಸುವ ಕ್ರಮಗಳ ಬಗ್ಗೆ ಸರ್ಕಾರ ಮಾತಾಡಬೇಕು ಎಂದಿದ್ದಾರೆ.

'ಜನರನ್ನು ಯಾವುದೇ ಹಂತದಲ್ಲಿ ಸರ್ಕಾರ ರಕ್ಷಣೆ ಮಾಡುತ್ತದೆ. ಅವರ ಜೀವಕ್ಕೆ ಆಧಾರವಾಗಿರುತ್ತದೆ,' ಎಂಬ ವಿಶ್ವಾಸವನ್ನು ತುಂಬುವುದು ಅಗತ್ಯ. ಅದು ಬಿಟ್ಟು ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡರೂ ಅದು ನಗಣ್ಯ. ಈ ವಿಷಯವನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಕೊರತೆ ನೀಗಿಸುವ ಕ್ರಮಗಳ ಬಗ್ಗೆ ಸರ್ಕಾರ ಮಾತಾಡಬೇಕು.
7/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2021

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.