ಮೆಟಾ ಕಂಪನಿಯು 500 ಮಿಲಿಯನ್ಗೂ ಅಧಿಕ ಬಳಕೆದಾರರನ್ನು (WhatsApp accounts banned – India) ಹೊಂದಿದ್ದು, ಇದೀಗ ವಾಟ್ಸ್ಆ್ಯಪ್ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತೀಯ
ಗ್ರಾಹಕರಿಂದ ಆಶ್ಚರ್ಯಕರವಾದ 10,442 ದೂರು ವರದಿಗಳನ್ನು ಸ್ವೀಕರಿಸಿದೆ. ಅದರಂತೆ 71,11,000 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ.
2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಸೆಪ್ಟೆಂಬರ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್ಆ್ಯಪ್
ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 71,11,000 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.
ವಾಟ್ಸ್ಆ್ಯಪ್ ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆಗಿದ್ದು, ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ 74ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.
500 ಮಿಲಿಯನ್ಗೂ ಅಧಿಕ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಕೇವಲ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 10,442 ದೂರು ವರದಿಗಳನ್ನು ಸ್ವೀಕರಿಸಿದೆ.
ಈ ವರದಿಗಳಿಗೆ ಪ್ರತಿಕ್ರಿಯೆಯಾಗಿ, ವಾಟ್ಸ್ಆ್ಯಪ್ (WhatsApp accounts banned – India) ಖಾತೆಯನ್ನು ಬ್ಯಾನ್ ಮಾಡಿದೆ.
ವಾಟ್ಸ್ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ,
ವಾಟ್ಸ್ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.
ವಾಟ್ಸ್ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್ಆ್ಯಪ್ ಬ್ಯಾನ್
ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.
ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ
ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.
ಇದನ್ನು ಓದಿ: ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಯಾವ ಜಿಲ್ಲೆಗೆ ಎಷ್ಟು ಪರಿಹಾರ.? ಇಲ್ಲಿದೆ ವಿವರ
- ಭವ್ಯಶ್ರೀ ಆರ್.ಜೆ