ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ: ಸಿದ್ದರಾಮಯ್ಯ

ಬೆಂಗಳೂರು, ಫೆ. 16: ಬೈಕ್, ಟಿವಿ, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ಸಚಿವ ಉಮೇಶ್ ಕತ್ತಿ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಚಿವ ಉಮೇಶ್ ಕತ್ತಿಯವರೇ, ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ. ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕೂತು ಜನತೆಗೆ‌ ಒಳ್ಳೆಯದನ್ನು ಮಾಡಿ.

ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ರೊಚ್ಚಿಗೆದ್ದು ಕತ್ತಿ ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version