Visit Channel

ಕೊರೊನಾ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಏನು ಮಾಡಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಸಿದ್ದರಾಮಯ್ಯ

pti8-15-2017-000168b-04-1515058994

ಬೆಂಗಳೂರು, ಏ. 19: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ, ದುಸ್ಥಿತಿ ಎದುರಾಗಲು ಸರ್ಕಾರದ ಅರಾಜಕತೆಯೇ ಕಾರಣ ಎಂದು ಕಿಡಿಕಾರಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಏನು ಮಾಡಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸಿದ್ದಾರೆ.

ಕೊರೊನಾ ಎರಡನೇ ಅಲೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ.

ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ. ಮುಖ್ಯಮಂತ್ರಿಗಳು ಆಸ್ಪತ್ರೆಯಲ್ಲಿದ್ದಾರೆ,‌ ರಾಜ್ಯ ಸರ್ಕಾರ ಐ.ಸಿ.ಯು ನಲ್ಲಿದೆ ಎಂದು ಟೀಕಿಸಿದರು.

ವರ್ಷದ ಹಿಂದೆ ಮೊದಲ ಬಾರಿ‌ ಕೊರೊನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೊನಾವನ್ನೂ‌ ತನ್ನ ಭ್ರಷ್ಟತೆಗೆ ಬಳಸಿಕೊಂಡ ರಾಜ್ಯ ಸರ್ಕಾರ ಈಗ ಕೈಚೆಲ್ಲಿ ಕೂತಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ. ಮುಖ್ಯಮಂತ್ರಿ ಅವರಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.

ಹೀಗಾಗಿ, ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು ಬಿಜೆಪಿ ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದ್ದಾರೆ.

Latest News

Bilkis Bano
ದೇಶ-ವಿದೇಶ

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650
ದೇಶ-ವಿದೇಶ

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.

Kannada
ಮನರಂಜನೆ

2000-2010ರ ಸಾಲಿನ ಕನ್ನಡ ಚಿತ್ರರಂಗದ ಟಾಪ್ 12 ಚಿತ್ರಗಳು ಯಾವುವು ಗೊತ್ತಾ? ಇಲ್ಲಿದೆ ಓದಿ

ಆ ಕಾಲಕ್ಕೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಹಲವು ಕೇಂದ್ರಗಳಲ್ಲಿ ಯಶಸ್ವಿಯಾಗಿ 25 ವಾರಕ್ಕೂ ಅಧಿಕ ಸಮಯ ಪ್ರದರ್ಶನ ಕಂಡಿತ್ತು.