Visit Channel

ಸಿಎಂ ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುತ್ತಿದವರು ಯಾರು ಗೊತ್ತಾ?: ಕಾಂಗ್ರೆಸ್ ಟ್ವೀಟ್

1lRoDAFc_400x400

ಬೆಂಗಳೂರು, ಜು. 19: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ರಾಜ್ಯ ಬಿಜೆಪಿಯಲ್ಲಿ
ಸಂಚಲನ ಮೂಡಿಸಿದೆ. ಭಾರೀ ಚರ್ಚೆಗೆ ಕಾರಣವಾಗಿರುವ ಈ ಆಡಿಯೋಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ! ಎಂದು ಟೀಕಿಸಿದೆ.

ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಪಕ್ಷದ ರಾಜ್ಯಾಧ್ಯಕ್ಷರಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.  ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್ ಆಗಿದ್ದರೂ ಎಂದು ಕಾಂಗ್ರೆಸ್ ಆರೋಪಿಸಿದೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.