ಕೊಡಗು : ಕೊಡಗು(Kodagu) ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ನೀಡಿದ ವರದಿಯ ಮೇರೆಗೆ ಜಿಲ್ಲಾಡಳಿತ ಬುಧವಾರದಿಂದ ಶನಿವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿದೆ.

ಈ ಆದೇಶದಿಂದ ಕಾಂಗ್ರೆಸ್ಸಿನ(Congress) `ಮಡಿಕೇರಿ ಚಲೋʼ ಪಾದಯಾತ್ರೆ ಏನಾಗಲಿದೆ ಎಂದು ಪ್ರಶ್ನೆ ಮೂಡಿದೆ. ಈ ಕುರಿತು ಚರ್ಚೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನೇ ಮುಂದಿಟ್ಟುಕೊಂಡು,
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ʼಮಡಿಕೇರಿ ಚಲೋʼ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಆದರೆ ಇದೀಗ ಕೊಡಗು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದು, ಮಡಿಕೇರಿ(Madikeri) ಮುತ್ತಿಗೆ ಕೈ ಬಿಡಲು ಕಾಂಗ್ರೆಸ್ ನಾಯಕರು ತೀರ್ಮಾನ ಮಾಡ್ತಾರಾ? ಎಂಬ ಪ್ರಶ್ನೆ ಮೂಡಿದೆ.

ಮೂಲಗಳ ಪ್ರಕಾರ, ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿರುವುದರಿಂದ ಹೋರಾಟ ಕೈ ಬಿಡುವುದು ಉತ್ತಮ. ಇಲ್ಲವಾದರೆ ಕೊಡಗಿನಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟು, ಹಿಂಸಾಚಾರ(Voilence) ನಡೆದರೆ, ಅದರ ನೇರ ಹೊಣೆಯನ್ನು ಕಾಂಗ್ರೆಸ್ ಪಕ್ಷ ಹೊರಬೇಕಾಗುತ್ತದೆ.
ಇದನ್ನೂ ಓದಿ : https://vijayatimes.com/jnu-vc-santishree-dhulipudi-pandit-statement/
ಚುನಾವಣೆ ಹತ್ತಿರವಿರುವಾಗ ಬಿಜೆಪಿ ನಾಯಕರು(BJP Leaders) ಇದನ್ನೇ ಬಂಡವಾಳ ಮಾಡಿಕೊಳ್ಳಬಹುದು ಎಂದು ಅನೇಕ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯನವರಿಗೆ ತಿಳಿಸಿದ್ದಾರೆ ಎನ್ನಲಾಗಿದ್ದು, ಆದರೆ ಸಿದ್ದರಾಮಯ್ಯ ಮಾತ್ರ ತಮ್ಮ ನಿಲುವನ್ನು ಸ್ಪಷ್ಟಪಡಿಸಿಲ್ಲ.

ರಾಜಾರೋಷವಾಗಿ ಘೋಷಣೆ ಮಾಡಿ, ಹೀಗೆ ದಿಢೀರನೇ ಹೋರಾಟದಿಂದ ಹಿಂದೆ ಸರಿದರೆ, ನನ್ನ ವರ್ಚಸ್ಸಿಗೆ ಧಕ್ಕೆಯುಂಟಾಗುತ್ತದೆ ಎಂದು ಸಿದ್ದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದ್ದು, ಮಡಿಕೇರಿಗೆ ಹೋಗಲೇಬೇಕು ಅನ್ನೋ ಹಟಕ್ಕೆ ಸಿದ್ದರಾಮಯ್ಯ ಬೀಳ್ತಾರಾ ಎನ್ನುವುದನ್ನು ಕಾದು ನೋಡಬೇಕು.
ಇನ್ನು ಈ ಕುರಿತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivkumar) ಅವರೊಂದಿಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ.