ಏಪ್ರಿಲ್ 15ರಿಂದ ಮಹಾರಾಷ್ಟ್ರದಲ್ಲಿ ಆಗಲಿದೆಯಾ ಸಂಪೂರ್ಣ ಲಾಕ್‌ಡೌನ್?

ಮುಂಬೈ, ಏ. 12: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 15 ರಿಂದ ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸುಳಿವು ನೀಡಿದ್ದಾರೆ.

ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಏಪ್ರಿಲ್ 15 ರಿಂದ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪ್ರತಿದಿನ 60 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡುವ ಕುರಿತು ಚರ್ಚೆ ನಡೆಸಿದ್ದಾರೆ.

ಇನ್ನು ಮಹಾರಾಷ್ಟ್ರದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್, ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

Exit mobile version