Belgavi : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Vidhana Soudha, Belgaum) ವಿಧಾನಮಂಡಲ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಬಾಣಂತಿಯರ ಸಾ* (Death of the Barantis) , ಶಿಶುಗಳ ಸಾ* (Infant death) , ವಕ್ಫ್ ವಿವಾದ, ಮುಡಾ ಅಕ್ರಮ (Waqf dispute, Muda illegal) , ವಾಲ್ಮೀಕಿ ನಿಗಮ ಹಗರಣ (Valmiki Corporation Scam) , ಅಬಕಾರಿ ಇಲಾಖೆ ಭ್ರಷ್ಟಾಚಾರ, ಹೀಗೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾಲು ಸಾಲು ಬಾಣಗಳು ಬಿಜೆಪಿಯ (BJP) ಬತ್ತಳಿಕೆಯಲ್ಲಿವೆ. ಆದರೆ, ಬಿಜೆಪಿಗೆ ಬಿಸಿ ತುಪ್ಪವಾಗಿರುವ ಯತ್ನಾಳ್ (Yatnal) , ಸದನದಲ್ಲಿ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದು ಕಮಲ ಪಡೆಗೆ ಆತಂಕ ತಂದೊಡ್ಡಿದೆ. ಹೀಗಾಗಿ ಕಣಕ್ಕಿಳಿದಿರುವ ವಿಪಕ್ಷ ನಾಯಕ ಆರ್.ಅಶೋಕ್, ಯತ್ನಾಳ್ರನ್ನೇ ವಿಶ್ವಾಸಕ್ಕೆ ತೆಗೆದುಕೊಂಡು ಸದನದಲ್ಲಿ ಯುದ್ಧಕ್ಕಿಳಿದು ಸರ್ಕಾರಕ್ಕೆ ಖೆಡ್ಡಾ ತೋಡಲು ಸಜ್ಜಾಗಿದ್ದಾರೆ.
ಬಿಜೆಪಿ ಸಿದ್ಧವಾಗಿಟ್ಟುಕೊಂಡಿರುವ ಬಾಣಗಳಿಗೆ ಕಾಂಗ್ರೆಸ್ ನಾಯಕರು (Congress leaders) ಕೂಡ ಕೊರೊನಾ ಹಗರಣದ ಪ್ರತ್ಯಸ್ತ್ರ ಸಿದ್ಧ ಮಾಡಿಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲ, ವಕ್ಫ್ ವಿಚಾರ (Waqf issue) ಮುಂದಿಟ್ಟರೆ, ಯತ್ನಾಳ್ ಪ್ರತ್ಯೇಕ ಹೋರಾಟ ಪ್ರಸ್ತಾಪಿಸಿ ತಿವಿಯುವ ಸಾಧ್ಯತೆ ಇದೆ. ಇದನ್ನರಿತ ಬಿಜೆಪಿ ನಾಯಕರು (BJP leaders) ಯತ್ನಾಳ್ರನ್ನೇ ವಿಶ್ವಾಸಕ್ಕೆ ತೆಗೆದುಕೊಂಡು ಸದನದಲ್ಲಿ ಹೋರಾಡಲು ಕೌಂಟರ್ ಪ್ಲ್ಯಾನ್ (Counter plan) ಮಾಡಿದ್ದಾರೆ. ಇದಕ್ಕೆ ಯತ್ನಾಳ್ ಕೂಡಾ ಜೈ ಎಂದಿದ್ದಾರೆ. ನಮ್ಮ ಆಂತರಿಕ ಜಗಳ ಏನೇ ಇರಲಿ, ರಾಜ್ಯದ ಹಿತಾಸಕ್ತಿಗಾಗಿ ಆರ್ ಅಶೋಕ್ ನೇತೃತ್ವದಲ್ಲೇ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಇನ್ನು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಸಂತಾಪ ಸೂಚನಾ (Condolence notice) ನಿರ್ಣಯ ಮಂಡನೆಯಾಗಲಿದ್ದು, ಕಳೆದ ಅಧಿವೇಶನದಿಂದ ಈಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು (Condolences will be offered) . ಬಳಿಕ ಪ್ರಶ್ನೋತ್ತರ ಅವಧಿ ಕೈಗೆತ್ತಿಕೊಂಡು ಕಲಾಪ ಮುಂದೂಡಲಾಗುವುದು. ಮಧ್ಯಾಹ್ನ 3ಕ್ಕೆ ಕಲಾಪ ಸಲಹಾ ಸಮಿತಿ ಸಭೆ ನಡೆಸಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಬೇಕಿರುವ ವಿಚಾರಗಳ (Issues to be discussed) ಬಗ್ಗೆ ಅಂತಿಮ ನಿರ್ಧಾರಿಸಲಾಗುವುದು ಎಂದು ವರದಿಗಳು ತಿಳಿಸಿವೆ.ಇದಕ್ಕೂ ಮೊದಲು ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಚನ್ನಪಟ್ಟಣದ ಸಿಪಿ.ಯೋಗೇಶ್ವರ್, ಸಂಡೂರಿನ ಇ.ಅನ್ನಪೂರ್ಣ ಹಾಗೂ ಶಿಗ್ಗಾಂವಿಯ ಯೂಸುಫ್ ಖಾನ್ (Yusuf Khan of Shiggami) ಪಠಾನ್ ನೂತನ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.