ದೆಹಲಿ : ಭಾರತದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರಾಸರಿಯಾಗಿ ಮಹಿಳೆಯರು(Womens) ಪುರುಷರಿಗಿಂತ(Men) ಹೆಚ್ಚು ಲೈಂಗಿಕ ಪಾಲುದಾರರನ್ನು(Sex Partners) ಹೊಂದಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ವರದಿ(Health Survey Report) ತಿಳಿಸಿದೆ.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ದೇಶದ 11 ರಾಜ್ಯಗಳಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚು ಲೈಂಗಿಕ ಪಾಲುದಾರರನ್ನು(Sex Partners) ಹೊಂದಿದ್ದಾರೆ. ಆದರೆ ತಮ್ಮ ಸಂಗಾತಿಯಾಗದ ಅಥವಾ ಅವರೊಂದಿಗೆ ವಾಸಿಸುವ ಯಾರೊಂದಿಗಾದರೂ ಲೈಂಗಿಕ ಸಂಭೋಗ ನಡೆಸಿದ ಪುರುಷರ ಶೇಕಡಾವಾರು ಪ್ರಮಾಣ 4 ರಷ್ಟಿದೆ, ಆದರೆ ಇದು ಮಹಿಳೆಯರಲ್ಲಿ ಶೇಕಡಾ 0.5 ರಷ್ಟಿದೆ ಎಂದು ವರದಿ ತಿಳಿಸಿದೆ.
ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು ದೇಶದ 1.1 ಲಕ್ಷ ಮಹಿಳೆಯರು ಮತ್ತು 1 ಲಕ್ಷ ಪುರುಷರನ್ನು ಈ ಸಮೀಕ್ಷೆಗೆ ಒಳಪಡಿಸಿದ್ದು, ರಾಜಸ್ಥಾನ, ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯಪ್ರದೇಶ, ಅಸ್ಸಾಂ, ಕೇರಳ, ಲಕ್ಷದ್ವೀಪ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಮಹಿಳೆಯರು ಸರಾಸರಿ 3.1 ಲೈಂಗಿಕ ಪಾಲುದಾರರನ್ನು ಹೊಂದಿದ್ದರೆ, ಇದೇ ರಾಜ್ಯಗಳಲ್ಲಿ ಪುರುಷರು ಸರಾಸರಿ 1.8 ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ.

ಇನ್ನು 2019-21ರ ಅವಧಿಯಲ್ಲಿ ನಡೆಸಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿಂದ ದೇಶದ 707 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದೆ. ಈ ರಾಷ್ಟ್ರೀಯ ವರದಿಯು ಸಾಮಾಜಿಕ-ಆರ್ಥಿಕ ಮತ್ತು ಇತರ ಹಿನ್ನೆಲೆ ಗುಣ ಲಕ್ಷಣಗಳ ಡೇಟಾವನ್ನು ಒದಗಿಸುತ್ತದೆ. ನೀತಿ ನಿರೂಪಣೆ ಮತ್ತು ಪರಿಣಾಮಕಾರಿ ಕಾರ್ಯಕ್ರಮ ಅನುಷ್ಠಾನಕ್ಕೆ ಉಪಯುಕ್ತವಾಗಿದೆ.
ಮಾಹಿತಿ : ಪಿಟಿಐ