Mumbai: ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ಇಂದು ನಡೆಯಲಿರುವ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯವನ್ನು (World Cup Semi-final) ವೀಕ್ಷಿಸಲು ಅನೇಕ ಗಣ್ಯರು ಮುಂಬೈನತ್ತ
ಪ್ರಯಾಣ ಬೆಳೆಸಿದ್ದಾರೆ. ಇಂದು (ನವೆಂಬರ್ 15) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದ, ಎರಡು ತಂಡಗಳ ನಡುವೆ ಭಾರೀ ಹೋರಾಟ ನಡೆಯಲಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ವಿಶ್ವಕಪ್ ಸೆಮಿಫೈನಲ್ ಪಂದ್ಯ ವೀಕ್ಷಿಸಲು ಖ್ಯಾತ ನಟ ರಜನಿಕಾಂತ್ ಚೆನ್ನೈ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದ್ದು, “ಭಾರತ
ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯವನ್ನು ನೋಡಲು ನಾನು ಮುಂಬೈಗೆ ಹೋಗುತ್ತಿದ್ದೇನೆ. ಭಾರತ ತಂಡದ ಗೆಲುವನ್ನು ನೋಡಲು ಕಾತುರನಾಗಿದ್ದೇನೆ”ಎಂದು ರಜನಿಕಾಂತ್ ತಿಳಿಸಿದ್ದಾರೆ.
ಇನ್ನು ಮೂಲಗಳ ಪ್ರಕಾರ, ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟ ರಣಬೀರ್ ಕಪೂರ್, ನಟ ಅಮೀರ್ ಖಾನ್, ಲೆಜೆಂಡರಿ ಫುಟ್ಬಾಲ್ ಆಟಗಾರ ಡೇವಿಡ್ ಬೆಕ್ಹ್ಯಾಮ್, ಮಹಾರಾಷ್ಟ್ರದ ಮುಖ್ಯಮಂತ್ರಿ
ಏಕನಾಥ್ ಸಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಐಶ್ವರ್ಯಾ ಬಚ್ಚನ್, ಅಭಿಷೇಕ್ ಬಚ್ಚನ್, ಸುನೀಲ್ ಶೆಟ್ಟಿ, ನಟ ಶಿವರಾಜ್ ಕುಮಾರ್, ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ ಅನೇಕ ಗಣ್ಯರು
ಪಂದ್ಯ ವೀಕ್ಷಿಸಲಿದ್ದಾರೆ.
ಪಂದ್ಯದ ವಿವರ :
ವೇಳೆ : ಮಧ್ಯಾಹ್ನ : 2 ಗಂಟೆಗೆ
ನೇರಪ್ರಸಾರ : ಸ್ಟಾರ್ ಸ್ಪೋರ್ಟ್ಸ್
ಸ್ಥಳ : ಮುಂಬೈನ ವಾಂಖೆಡೆ ಸ್ಟೇಡಿಯಂ
ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ , ಮೊಹಮ್ಮದ್ ಸಿರಾಜ್, (World Cup Semi-final) ಕುಲ್ದೀಪ್ ಯಾದವ್, ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ),
ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಬುಮ್ರಾ, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, , ಪ್ರಸಿದ್ಧ್ ಕೃಷ್ಣ.
ನ್ಯೂಜಿಲ್ಯಾಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಡೇರಿಲ್ ಮಿಚೆಲ್, ಜೇಮ್ಸ್, ಇಶ್ ಸೋಧಿ, ವಿಲ್ ಯಂಗ್ , ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್
ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಕೈಲ್ ಜಾಮಿಸನ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್.
ಇದನ್ನು ಓದಿ: ಅಕ್ರಮ ವಿದ್ಯುತ್ ಸಂಪರ್ಕ : ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ – ಸ್ಪಷ್ಟನೆ ನೀಡಿದ ಎಚ್ಡಿಕೆ