ಭಾರತದ ಸೆಮಿಫೈನಲ್‌ ಕನಸು ಭಗ್ನ

ದುಬೈ ನ 8 : ಭಾನುವಾರ ನಡೆದ ಸೂಪರ್‌ 12ರ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವು ಅಫ್ಘಾನಿಸ್ತಾನದ ವಿರುದ್ದ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಸೆಮಿಫೈನಲ್‌ಗೆ ಪ್ರವೇಶಿದೆ. ಇದರಿಂದ ಭಾರತದ ಸೆಮೀಸ್‌ ಕನಸು ಭಗ್ನಗೊಂಡಿದ್ದು ಟಿ-20 ವಿಶ್ವಕಪ್‌ನಿಂದ ಹೊರ ಬಿದ್ದಿದೆ.

ಭಾನುವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಅಫ್ಘಾನಿಸ್ಥಾನವನ್ನು ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದ್ದು, ಭಾರತ ತಂಡದ ಕನಸು ಭಗ್ನಗೊಂಡಿದೆ.

ಹೊಸ ಲೆಕ್ಕಾಚಾರದಲ್ಲಿ ಅಫ್ಘಾನ್ ತಂಡವನ್ನು ನಂಬಿಕೊಂಡ ಭಾರತಕ್ಕೆ ಮತ್ತೊಂದು ಆಘಾತವಾಗಿದ್ದು ಸೆಮಿಫೈನಲ್‌ ರೇಸ್‌ನಿಂದ ಹೊರಬಿದ್ದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ಥಾನ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿ ನಿರಾಸೆ ಮೂಡಿಸಿತು

ಗುರಿ ಬೆನ್ನಟ್ಟಿದ ಕಿವೀಸ್ ಪಡೆ 18.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 125 ರನ್ ಗಳಿಸುವ ಮೂಲಕ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಸೆಮಿ ಫೈನಲ್‌ಗೆ ಜಿಗಿಯಿತು.

Exit mobile version