ಸೌತಾಂಪ್ಟನ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಣಾಹಣಿ

ಹೊಸದಿಲ್ಲಿ, ಮಾ. 10: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೌತಾಂಪ್ಟನ್‌ನಲ್ಲಿ ನಡೆಯಲಿದೆ.

ಈ ಹಿಂದೆ ನಿರ್ಧಾರವಾಗಿದ್ದಂತೆ ಫೈನಲ್ ಕ್ರಿಕೆಟ್‌ನ ಅತ್ಯಂತ ಶ್ರೇಷ್ಠ ಸ್ಥಳ ಲಾರ್ಡ್ಸ್‌ನಲ್ಲಿ ಆಡಬೇಕಿತ್ತು. ಆದರೆ ಇದೀಗ ಫೈನಲ್ ಪಂದ್ಯದ ಸ್ಥಳವನ್ನು ಬದಲಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯವನ್ನು ನ್ಯೂಜಿಲೆಂಡಿನ ಸೌತಾಂಪ್ಟನ್ ನಲ್ಲಿ ನಡೆಸಲು ತೀರ್ಮಾನಿಸಿದೆ.

ಯುಕೆ ಹಾಗೂ ಸುತ್ತಮುತ್ತಲಿನ ರಾಷ್ಟ್ರಗಳಲ್ಲಿ ಕೊರೊನಾ ಆತಂಕ ಇನ್ನೂ ಕಡಿಮೆ ಆಗದ ಹಿನ್ನೆಲೆಯಲ್ಲಿ ಫೈನಲ್ ಪಂದ್ಯದ ಸ್ಥಳ ಬದಲಾವಣೆ ಮಾಡಲಾಗಿದೆ. ಐಸಿಸಿ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಜಂಟಿಯಾಗಿ ಈ ನಿರ್ಧಾರ ಕೈಗೊಂಡಿದೆ.

ಚೊಚ್ಚಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಪಂದ್ಯಾವಳಿಯ ಫೈನಲ್‌ ಪಂದ್ಯ ಜೂನ್ 18ರಂದು ನಡೆಯಲಿದ್ದು, ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳು ಪ್ರಶಸ್ತಿಗಾಗಿ ಮುಖಾಮುಖಿ ಆಗಲಿವೆ.

Exit mobile version