Visit Channel

ಜಗತ್ತಿನ ಅತೀ ಉದ್ದದ ಹೆಸರು ಇದು ; ಈ ಹೆಸರನ್ನು ಓದುವುದು ಅಸಾಧ್ಯ, ನೀವು ಒಮ್ಮೆ ಪ್ರಯತ್ನಿಸಿ

Guiness Record

ನಮ್ಮ ದೇಶದಲ್ಲಿ ನಾಮಕರಣ ಕಾರ್ಯಕ್ಕೆ ಬಹಳ ಪ್ರಾಶಸ್ತ್ಯವಿದೆ. ತಂದೆ ತಾಯಿಯರು ತಮ್ಮ ಮಕ್ಕಳಿಗೆ ಹೆಸರಿಡುವಾಗ ವಿವಿಧ ಕೋನಗಳಲ್ಲಿ ಯೋಚಿಸುತ್ತಾರೆ. ಮಗುವಿನ ರೂಪ ಲಾವಣ್ಯ, ಹುಟ್ಟಿದ ಸಂದರ್ಭಕ್ಕೆ ತಕ್ಕಂತೆ ಕೆಲವರು ಹೆಸರಿಟ್ಟರೆ, ಇನ್ನೂ ಕೆಲವರು ತಮ್ಮ ಇಷ್ಟದ ವ್ಯಕ್ತಿ, ನಟ, ನಟಿ ಹೆಸರೋ ಅಥವಾ ಕುಟುಂಬದ ಅಳಿದ ಸದಸ್ಯರ ನೆನಪಿಗಾಗಿ ಅವರ ಹೆಸರನ್ನೇ ಇಡುತ್ತಾರೆ. ಇನ್ನೂ ಕೆಲವರು ಹುಟ್ಟಿದ ದಿನ ಘಳಿಗೆಗೆ ತಕ್ಕಂತೆ ಮಕ್ಕಳಿಗೆ ಹೆಸರಿಡುತ್ತಾರೆ.

Jessie


ಆದರೆ, ಉತ್ತರ ಅಮೆರಿಕದ ಟೆಕ್ಸಾಸ್ ನಲ್ಲಿರುವ ಹೂಸ್ಟನ್‍ನ ಜೇಮ್ಸ್ ವಿಲಿಯಮ್ಸ್ ಮತ್ತು ಸಾಂಡ್ರಾ ವಿಲಿಯಮ್ಸ್ ದಂಪತಿ ತಮ್ಮ ಮಗಳಿಗೆ ಅತ್ಯಂತ ವಿಶಿಷ್ಟವಾದ ಹೆಸರನ್ನು ಇಟ್ಟಿದ್ದಾರೆ. ಸುಮಾರು 1,019 ಅಕ್ಷರಗಳಿರುವ ಹೆಸರನ್ನು ವಿಲಿಯಮ್ಸ್ ಮತ್ತು ಸಾಂಡ್ರಾ ತಮ್ಮ ಮಗಳಿಗೆ ನಾಮಕರಣ ಮಾಡಿದ್ದಾರೆ. ಆ ಹೆಸರು ಈಗ ಇಡೀ ವಿಶ್ವದಾದ್ಯಂತ ಅಚ್ಚರಿಯ ವಿಷಯವಾಗಿದ್ದು, ಗಿನ್ನಿಸ್ ರೆಕಾರ್ಡ್ ಕೂಡ ಮಾಡಿದೆ. ಜಗತ್ತಿನ ಅತೀ ಉದ್ದದ ಹೆಸರು ಎಂಬ ಖ್ಯಾತಿಯನ್ನು ಪಡೆದುಕೊಂಡಿರುವ, ಆ ಹೆಸರು ಕೇಳಿದರೆ ಖಂಡಿತ ನಿಮಗೂ ಅಚ್ಚರಿಯಾಗುತ್ತೆ. ಆಕೆಯ ಹೆಸರು ಹೀಗಿದೆ ನೋಡಿ,


Rhoshandiatellyneshiaunneveshenkescianneshaimondrischlyndasaccarnaerenquellenendrasamecashaunettethalemeicoleshiwhalhinive’onchellecaundenesheaalausondrilynnejeanetrimyranaekuesaundrilynnezekeriakenvaunetradevonneyavondalatarneskcaevontaepreonkeinesceellaviavelzadawnefriendsettajessicannelesciajoyvaelloydietteyvettesparklenesceaundrieaquenttaekatilyaevea’shauwneoraliaevaekizzieshiyjuanewandalecciannereneitheliapreciousnesceverroneccaloveliatyronevekacarrionnehenriettaescecleonpatrarutheliacharsalynnmeokcamonaeloiesalynnecsiannemerciadellesciaustillaparissalondonveshadenequamonecaalexetiozetiaquaniaenglaundneshiafrancethosharomeshaunnehawaineakowethauandavernellchishankcarlinaaddoneillesciachristondrafawndrealaotrelleoctavionnemiariasarahtashabnequckagailenaxeteshiataharadaponsadeloriakoentescacraigneckadellanierstellavonnemyiatangoneshiadianacorvettinagodtawndrashirlenescekilokoneyasharrontannamyantoniaaquinettesequioadaurilessiaquatandamerceddiamaebellecescajamesauwnneltomecapolotyoajohnyaetheodoradilcyana.

Guiness record


ತನ್ನ ಮಗಳಿಗೆ ಈ ಹೆಸರಿಡಲು ಸಾಂಡ್ರಾ ವಿಲಿಯಮ್ಸ್ ಅವರು ಸತತ ಒಂದು ವರ್ಷ ಯೋಚನೆ ಮಾಡಿದ್ದರಂತೆ. ಈ ಹೆಸರಿನ ಜನನ ಪ್ರಮಾಣ ಪತ್ರವೇ 2 ಅಡಿ ಉದ್ದ ಇದೆ. ಅತ್ಯಂತ ಉದ್ದದ ಹೆಸರಿನ ಈ ಮಹಿಳೆಗೆ ಈಗ 38 ವರ್ಷ ವಯಸ್ಸು. ಇತ್ತೀಚಿಗೆ ಈಕೆಯ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್‌ ಕೂಡ ಮಾಡಿದೆ.

  • ಪವಿತ್ರ ಸಚಿನ್

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.