ಕೊರೋನಾ ಸಂಕಷ್ಟದ ನಡುವೆ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಬರೆ

ನವದೆಹಲಿ, ಮೇ. 05: ದೇಶದಲ್ಲಿ ಕೊರೋನಾದ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.‌ ಹಲವು ನಿರ್ಬಂಧಗಳ ನಡುವೆಯೂ ಪ್ರತಿ ದಿನ‌ ಮೂರೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಮತ್ತೆ ಲಾಕ್ಡೌನ್ ಮಾಡಲೇಬೇಕಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಆದರೆ ಇವೆಲ್ಲದರ ನಡುವೆ ಕೊರೋನಾ ಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿದೆ.

ಕೇಂದ್ರ ಸರ್ಕಾರ ನಿನ್ನೆ (ಮೇ 4ರಂದು) ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿತ್ತು. ಇವತ್ತು ಮತ್ತೆ ಬಡ ದೇಶವಾಸಿಗೆ ಪ್ರತಿ ಪೆಟ್ರೋಲ್ ಮೇಲೆ 13 ಪೈಸೆ ಮತ್ತು ಪ್ರತಿ ಡೀಸೆಲ್ ಮೇಲೆ 21 ಪೈಸೆ ಬೆಲೆ ಏರಿಸಿ ಬರೆ ಎಳೆದಿದೆ.

Exit mobile version