ಜಾರ್ಖಂಡ್ ಪ್ರವೇಶಿಸಿದ ಯಾಸ್: 8 ಲಕ್ಷ ಜನರ ಬದುಕು ಅತಂತ್ರ

ರಾಂಚಿ, ಮೇ. 27: ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಸುರಿಸಿರುವ ಯಾಸ್ ಚಂಡಮಾರುತವು ಜಾರ್ಖಂಡ್ ಪ್ರವೇಶಿಸಿದೆ.

ಚಂಡಮಾರುತದಿಂದ ಆಗುವ ಹಾನಿಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಾರ್ಖಂಡ್ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸುಮಾರು 12,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಯಸ್‌ ಚಂಡಮಾರುತದಿಂದ 8 ಲಕ್ಷ ಜನರ ಜೀವನದ ಮೇಲೆ ಪರಿಣಾಮ ಉಂಟಾಗಿದ್ದು, ಜನರು ಹೊರಗೆ ಓಡಾಡುವುದನ್ನು ತಪ್ಪಿಸಲು ರಾಜ್ಯದ ಕೆಲವು ಪ್ರದೇಶಗಳಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿ ಮಾಡಲಾಗಿದೆ.

ಬುಧವಾರ ಗಂಟೆಗೆ 130ರಿಂದ 145 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಗೆ ಅಪ್ಪಳಿಸಿದ ‘ಯಸ್‌’ ಚಂಡಮಾರುತವು, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅಪಾರ ಹಾನಿಗೆ ಕಾರಣವಾಗಿದೆ. ಎರಡೂ ರಾಜ್ಯಗಳಲ್ಲಿ ಭಾರಿ ಮಳೆ ಸುರಿದಿದೆ. ಮನೆಗಳು ಮತ್ತು ಹೊಲಗಳು ಹಾನಿಗೀಡಾಗಿವೆ. ಒಡಿಶಾದಲ್ಲಿ ಮೂವರು ಮತ್ತು ಬಂಗಾಳದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ.

Exit mobile version