Yass Cyclone: ಮೇ. 26ಕ್ಕೆ ಆರಂಭವಾಗಲಿದೆ ಪಶ್ಚಿಮ ಬಂಗಾಳ, ಒರಿಸ್ಸಾದಲ್ಲಿ ಯಾಸ್‌ ಚಂಡಮಾರುತದ ಅಬ್ಬರ

ಕೊಲ್ಕತ್ತಾ ಮೇ. 22: ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ತೌಕ್ತೆ (Cyclone Tauktae) ಚಂಡಮಾರುತ ಅಪ್ಪಳಿಸಿ ಅವಾಂತರ ಸೃಷ್ಟಿಸಿತ್ತು. ಇನ್ನೂ ಆ ಚಂಡಮಾರುತದ ಪರಿಣಾಮ ಸಂಪೂರ್ಣ ಮಾಸಿಲ್ಲ. ಮೇ 26ರಂದು ಅಷ್ಟರಲ್ಲಾಗಲೇ ಮತ್ತೊಂದು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ. ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತ (Cyclone Yaas) ಮೇ 23ರಿಂದ ಆರ್ಭಟಿಸಲಿದ್ದು, ಇಂದಿನಿಂದ ಮೇ 26ರವರೆಗೆ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಯಾಸ್ ಚಂಡಮಾರುತವೇಳಲಿದೆ.

ಪಶ್ಚಿಮ ಬಂಗಾಳ, ಒರಿಸ್ಸಾ, ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೇ 26ರಂದು ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಲಿದೆ. ಹೀಗಾಗಿ, ಕಡಲ ತೀರದ ಪ್ರದೇಶಗಳಲ್ಲಿ ಮೇ 26ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಯಾಸ್​ ಚಂಡಮಾರುತದ ಅಬ್ಬರ ತೀವ್ರವಾಗಿರಲಿದೆ ಎಂಬ ಕಾರಣಕ್ಕೆ ಈಗಾಗಲೇ ಎನ್​ಡಿಆರ್​ಎಫ್, ಕೋಸ್ಟಲ್ ಗಾರ್ಡ್, ಐಎನ್​ಎಸ್​ ಚಿಲಿಕಾಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಸನ್ನದ್ಧರಾಗಿರಲು ಸೂಚಿಸಿದೆ. ಮೇ 26ರಂದು ಯಾಸ್ ಚಂಡಮಾರುತ ಅಪ್ಪಳಿಸುವುದರಿಂದ ಈಗಾಗಲೇ ಭಾರೀ ಮಳೆ ಶುರುವಾಗಿದ್ದು, ಪಶ್ಚಿಮ ಬಂಗಾಳ, ಗುಜರಾತ್, ಒರಿಸ್ಸಾ, ಗೋವಾದ ಎಲ್ಲ ಕರಾವಳಿ ತೀರದ ಜಿಲ್ಲೆಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ.

ಜೂನ್ 1ರಂದು ಕೇರಳಕ್ಕೆ ಮುಂಗಾರು (Kerala Monsoon) ಪ್ರವೇಶವಾಗಲಿದೆ. ಅಷ್ಟರೊಳಗೆ ಯಾಸ್ ಎಂಬ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಇನ್ನೊಂದು ವಾರ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇ 26ರಂದು ಸೃಷ್ಟಿಯಾಗುವ ಯಾಸ್ ಚಂಡಮಾರುತ ಬಳಿಕ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ಕಡೆಗೆ ಚಲಿಸುವ ಸಾಧ್ಯತೆಯಿದೆ. ಹೀಗಾಗಿ, ಕರಾವಳಿ ತೀರದಲ್ಲಿರುವ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಬದಲಾಗಲಿದ್ದು, ಗುಜರಾತ್, ಮಹಾರಾಷ್ಟ್ರದ, ಪಶ್ಚಿಮ ಬಂಗಾಳ, ಒರಿಸ್ಸಾ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯ ಪೂರ್ವ ಕೇಂದ್ರ ಹಾಗೂ ನೆರೆಯ ಉತ್ತರ ಅಂಡಮಾನ್‍ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆ ಅಧಿಕೃತ ಎಚ್ಚರಿಕೆ ಹೊರಡಿಸಿದೆ. ಇದರ ಪ್ರಭಾವದಿಂದ ಗಾಳಿಯ ವೇಗ ಹೆಚ್ಚಾಗಿ ಮೇ 26ರವರೆಗೆ ಅಂಡಮಾನ್‍ ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಉಂಟಾಗಲಿದೆ.

Exit mobile version