ಬಿಜೆಪಿಯಲ್ಲಿ ಶಿಸ್ತಿನ ಪಾಠ ಕೇವಲ BSY ಬ್ರಿಗೇಡ್ ಗೆ ಮಾತ್ರವೇ? ಬೊಮ್ಮಾಯಿಯವರ ವಿರುದ್ಧ ಮಾತನಾಡಿದ ಪ್ರತಾಪ್ ಸಿಂಹರಿಗೆ ಶಿಸ್ತುಕ್ರಮದ ನೋಟಿಸ್ ಇಲ್ಲ. BSY ವಿರುದ್ಧ (Yatnal Slams Congress)
ಅಬ್ಭರಿಸಿದ್ದ ಯತ್ನಾಳರಿಗೆ (Yatnal) ನೋಟಿಸ್ ಇಲ್ಲ. ನಿರಾಣಿ ವಿರುದ್ಧ ಮಾತನಾಡಿದವರಿಗೆ ನೋಟಿಸ್ ಇಲ್ಲ. ಬಿಜೆಪಿಯಲ್ಲಿ ಲಿಂಗಾಯತ ನಾಯಕತ್ವವನ್ನು ಹಾಗೂ BSY ಬೆಂಬಲಿಗರನ್ನು
ಸಂಪೂರ್ಣ ಮುಗಿಸಿಹಾಕಲು ಸಂತೋಷ ಕೂಟ ಪಣ ತೊಟ್ಟಿದೆ.

ಬಿಜೆಪಿಯ ‘ಫಟಿಂಗ ಪಂಚೆ‘ಯ ವಿರುದ್ಧ ಮಾತನಾಡಿದ್ದೇ ತಡ ರೇಣುಕಾಚಾರ್ಯರಿಗೆ 24 ಗಂಟೆಯೊಳಗೆ ನೋಟಿಸ್ ಜಾರಿಯಾಗಿದೆ. ಆದರೆ ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದು ಬಹಿರಂಗವಾಗಿಲ್ಲ,
ನೋಟಿಸ್ ತೋರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ್ದಾರೆ ಯತ್ನಾಳ್. ಪಂಚೆ ಪಡೆಯ ಮಾತುಗಳು ಪಕ್ಷ ವಿರೋಧಿ ಎಸಿಕೊಳ್ಳುವುದಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್ (Congress)
ಬಿಜೆಪಿಯ ಆಂತರಿಕ ವಿಚಾರದ ಕುರಿತು ಟ್ವೀಟ್ (Yatnal Slams Congress) ಮಾಡಿ ಲೇವಡಿ ಮಾಡಿತ್ತು.
ಇದನ್ನು ಓದಿ: ತರಕಾರಿ ರೇಟ್ ಕೇಳಿದ್ರೇ ಶಾಕ್! ಕಳೆದ ವಾರಕ್ಕಿಂತ ಕೆಜಿ ಗೆ 20ರಿಂದ 30 ಏರಿಕೆ, ಮಾಂಸ ದರವೂ ಗಣನೀಯ ಏರಿಕೆ!
ರಾಜ್ಯ ಕಾಂಗ್ರೆಸ್ನ ಈ ಟ್ವೀಟ್ಗೆ ಟಾಂಗ್ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ (Basavanagowda Patil Yatnal) , ನಮ್ಮ ಪಕ್ಷದ ಆಂತರಿಕ ವಿಚಾರ ನಿಮಗೆ ಏನು ಸಂಬಂಧ.
ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ನಮ್ಮಲ್ಲಿ “Internal Democracy” ಇದೆ, Dont Disturb ಅಂತ ಗದರಿಸುವ ಸಂಸ್ಕೃತಿ ಇಲ್ಲ. ನನ್ನನ್ನು ಟ್ಯಾಗ್ ಮಾಡಿದ್ರೆ ಜಾಡಿಸ್ತೀನಿ ಅಂತ, ಹೆಸರು
ಬರೆದು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬೇಡಿ. ನಿಮ್ಮ ಮಹದೇವಪ್ಪನಿಗೆ, ಕಾಕಪಾಟಿಲನಿಗೆ ಕೊಟ್ಟಿದ್ದ ಮಾತು ಪೂರೈಸಲು ಕೆಲಸ ಮಾಡಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಇನ್ನೊಂದು ಟ್ವೀಟ್ನಲ್ಲಿ ರಾಜ್ಯ ಕಾಂಗ್ರೆಸ್ “ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂಬ ಪೋಸ್ಟರ್ (Poster) ಹಂಚಿಕೊಂಡು, ಇನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ
ಯಾರನ್ನೂ ಆಯ್ಕೆ ಮಾಡದಿರುವ ಬಿಜೆಪಿಯನ್ನು ಲೇವಡಿ ಮಾಡಿತ್ತು. ಪೋಸ್ಟರ್ನಲ್ಲಿ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ
(University) ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು
ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಹಾಕಲಾಗಿದೆ.
ರಾಜ್ಯ ಕಾಂಗ್ರೆಸ್ನ (Congress) ಈ ಟ್ವೀಟ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು, ನಿಮ್ಮ ಪಕ್ಷಕ್ಕೆ ಸತತವಾಗಿ 9 ವರ್ಷಗಳಿಂದ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವಿಲ್ಲ.
ಭಾರತದ ಪುರಾತನ ರಾಜಕೀಯ ಪಕ್ಷದ ಗತಿ ಇದು. ಲೋಕಸಭ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಕೂಡ ನಮ್ಮ ದೇಶದ ಜನ ಕುರ್ಚಿ ಕೊಡಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.