Bengaluru: ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಆಂತರಿಕ ಬಂಡಾಯ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭಾ ಚುನಾವಣೆ ಸೋಲಿನ ಪರಾಮರ್ಶೆ (yatnal vs nirani) ಸಭೆಗಳಲ್ಲಿ ಬಿಜೆಪಿ ನಾಯಕರೆಲ್ಲಾ,

ಸ್ವಪಕ್ಷದ ನಾಯಕರ ವಿರುದ್ದವೇ ಭಾಷಣ ಮಾಡುತ್ತಿದ್ದರೆ, ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ, ಸಭೆಗಳಲ್ಲಿ ಗದ್ದಲ ಎಬ್ಬಿಸುತ್ತಿದ್ದಾರೆ. ವಿಜಯಪುರ, ಬಾಗಲಕೋಟೆ, ಮೈಸೂರು,ಬೆಳಗಾವಿ ಸೇರಿದಂತೆ
ಅನೇಕ ಜಿಲ್ಲೆಗಳಲ್ಲಿ ನಡೆದ ಸಭೆಗಳಲ್ಲಿ ಭಾರೀ ವಾಗ್ದಾದವೇ (yatnal vs nirani) ನಡೆದಿದೆ.
ಬಾಗಲಕೋಟೆಯಲ್ಲಿ ನಡೆದ ಸಭೆಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಮುರುಗೇಶ್ ನಿರಾಣಿ ನಡುವೆ ತೀವ್ರ ವಾಕ್ ಸಮರ ನಡೆದರೆ, ವಿಜಯಪುರದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಇದನ್ನು ಓದಿ: ನಿವೃತ್ತಿಗೆ ಮುನ್ನ ಉದ್ಯೋಗಿಯು ಸಾವನ್ನಪ್ಪಿದರೆ ಅವರ ಇಪಿಎಫ್ ಹಣಕ್ಕೆ ನಾಮಿನಿ ಕ್ಲೈಮ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಸಮ್ಮುಖದಲ್ಲೇ ಯತ್ನಾಳ್ ಮತ್ತು ನಡಹಳ್ಳಿ ನಡುವೆ ವಾಕ್ ಸಮರ ನಡೆದಿದೆ. ಇದಕ್ಕೂ ಮುನ್ನ ಸಂಸದ ಪ್ರತಾಪ್ ಸಿಂಹ, ಸಿಟಿ ರವಿ, ಸಿಪಿ ಯೋಗೇಶ್ವರ್ ಕೆಲ ನಾಯಕರು ಚುನಾವಣೆಯಲ್ಲಿ ಒಳಒಪ್ಪಂದ ಮಾಡಿಕೊಂಡ
ಪರಿಣಾಮ ಬಿಜೆಪಿ ಹೀನಾಯವಾಗಿ ಸೋಲಬೇಕಾಯಿತು ಎಂದು ಪರೋಕ್ಷವಾಗಿ ಬಸವರಾಜ ಬೊಮ್ಮಾಯಿ ವಿರುದ್ದ ವಾಗ್ದಾಳಿ ನಡೆಸಿದ್ದರು. ಹೀಗೆ ಬಿಜೆಪಿ ನಾಯಕರೆಲ್ಲಾ ವೈಯಕ್ತಿಕ ಮಟ್ಟದಲ್ಲಿ ಟೀಕೆಗಳನ್ನ ಮಾಡುತ್ತಿದ್ದರೆ,
ಬಿಜೆಪಿ ಹೈಕಮಾಂಡ್ ಮಾತ್ರ ಸೈಲೆಂಟ್ ಆಗಿದೆ ಎಲ್ಲವನ್ನೂ ಗಮನಿಸುತ್ತಿದೆ.

ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಆಂತರಿಕ ಕಲಹವನ್ನು ಶಮನಗೊಳಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ. ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ನಾಯಕರ ನಡುವಿನ
ವೈಮನಸ್ಸುಗಳು ಸಾರ್ವಜನಿಕವಾಗಿ ಪ್ರಕಟವಾಗಲಿ ಎಂಬ ಉದ್ದೇಶವನ್ನೇ ಬಿಜೆಪಿ ಹೈಕಮಾಂಡ್ ಹೊಂದಿರುವಂತೆ ಕಾಣುತ್ತಿದೆ. ಯಾವ ನಾಯಕರ ಮೇಲೆಯೂ ಹೈಕಮಾಂಡ್ ಯಾವುದೇ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ.
ಯಾವ್ಯಾವ ನಾಯಕರ ಮೇಲೆ ಯಾವ ಶಿಸ್ತುಕ್ರಮ ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇನ್ನೊಂದೆಡೆ ರಾಜ್ಯ ಬಿಜೆಪಿ ನಾಯಕರ ಆಂತರಿಕ ಬಂಡಾಯವನ್ನ ಟೀಕಿಸಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ ಬಿಎಸ್ವೈ ಕೂಟದ ನಡುವೆ
ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ?
ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ!? ಆತ್ಮಾವಲೋಕನ ಸಭೆಗಳು ನಡೆಯುತ್ತಿರುವುದು ನೋಡಿದರೆ ಬಿಜೆಪಿ ಪಕ್ಷವೇ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವವಿದೆ.
ಬಿಜೆಪಿಯಲ್ಲಿ ಎಲ್ಲರೂ ಸದಾ ಚೂರಿ ಹಿಡಿದುಕೊಂಡೇ ಓಡಾಡುತ್ತಿರುವಂತಿದೆ, ಪರಸ್ಪರ ಬೆನ್ನಿಗೆ ಚೂರಿ ಹಾಕಿಕೊಳ್ಳಲು. ಬೊಮ್ಮಾಯಿ vs ಯತ್ನಾಳ್ , ಯತ್ನಾಳ್ vs ನಿರಾಣಿ, ಈಶ್ವರಪ್ಪ vs ವಲಸಿಗರು,
ಪ್ರತಾಪ್ ಸಿಂಹ vs ಬೊಮ್ಮಾಯಿ, ಸೋಮಣ್ಣ vs ಸಂತೋಷ್, ಸಿ ಟಿ ರವಿ vs ಬಿಎಸ್ವೈ. ಬಿಜೆಪಿಯಲ್ಲಿ ಮಾತಿನ ಮಲ್ಲಯುದ್ಧ ನಡೆಯುತ್ತಿದೆ, ಮುಂದೆ RSS ನವರ ಲಾಠಿ ಕಸಿದುಕೊಂಡು
ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.