Visit Channel

ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ, ನಾಯಕತ್ವ ಬದಲಾಗಬೇಕು: ವಿಶ್ವನಾಥ್

cb4a17d6-556b-472d-9645-1f746f3f71b7

ಬೆಂಗಳೂರು,ಜೂ.17: ರಾಜ್ಯ ಬಿಜೆಪಿಯಲ್ಲಿ ಎದುರಾಗಿರುವ ನಾಯಕತ್ವ ಬದಲಾವಣೆ ಕೂಗಿಗೆ ದನಿಗೂಡಿಸಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಯಸ್ಸಾಗಿರುವ ಕಾರಣ ನಾಯಕತ್ವ ಬದಲಾಗಬೇಕು ಎಂದು ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಯಡಿಯೂರಪ್ಪ ಪರ ಬ್ಯಾಟ್ ಬೀಸುತ್ತಿರುವ ಮಠಾಧೀಶರು ಬಸವಣ್ಣನವರ ತತ್ವ ಮರೆಯಬಾರದು ಎಂದು ಸಲಹೆ ನೀಡುವ ಮೂಲಕ ಮಠಾಧಿಪತಿಗಳು ರಾಜಕೀಯಕ್ಕೆ ಎಂಟ್ರಿ ಆಗುವುದು ತರವಲ್ಲ ಎಂದು ಕಿಡಿಕಾರಿದ್ದಾರೆ.

ಹೊಸ ಮುಖ್ಯಮಂತ್ರಿ ಆಯ್ಕೆ ಮಾಡಿದ ನಂತರ ಯಡಿಯೂರಪ್ಪ ಅವರು ಮಾರ್ಗದರ್ಶನ ನೀಡಲಿ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಪರ್ಯಾಯ ನಾಯಕತ್ವವೆ ಇಲ್ಲ ಎಂಬುದು ಅರ್ಥಹೀನ ಎಂದು ಆಕ್ರೋಶದ ನುಡಿಗಳ್ನಾಡಿದ ಅವರು, ಈ ಎಲ್ಲಾ ವಿಚಾರದ ಬಗ್ಗೆ ಅರುಣ್ ಸಿಂಗ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.