ಯಡಿಯೂರಪ್ಪ ನಮ್ಮ ಸರ್ವ ಸಮ್ಮತ ನಾಯಕ: ವೈರಲ್ ಆಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಬೆಂಗಳೂರು, ಜು. 19: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ಇಲ್ಲ. ವೈರಲ್ ಆಗಿರುವ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಸಚಿವರಾದ ಈಶ್ವರಪ್ಪ, ಜಗದೀಶ್ ಶೆಟ್ಟರ್ ಟೀಂ ಸಂಪೂರ್ಣ ಬದಲಾಗುತ್ತದೆ ಎಂಬ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಕುರಿತು ಸ್ಪಷ್ಟನೆ ನೀಡಿದ ನಳಿನ್ ಕುಮಾರ್ ಕಟೀಲ್, ವೈರಲ್  ಆಗಿರುವ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಸಿಎಂ ಗೆ ಪತ್ರ ಬರೆದ ತನಿಖೆಗೆ ಒತ್ತಾಯಿಸುತ್ತೇನೆ. ಈ ಬಗ್ಗೆ ತನಿಖೆಯಿಂದ ಸತ್ಯಾಂಶ ಬಯಲಿಗೆ ಬರಲಿದೆ ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಲೋಚನೆ ಹೈಕಮಾಂಡ್ ಮುಂದೆ ಇಲ್ಲ. ಯಡಿಯೂರಪ್ಪ ಬಿಜೆಪಿಗೆ ಆತ್ಮವಿದ್ದಂತೆ, ಅವರು ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ಹೇಳಿದರು.

Exit mobile version