ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ

ಬೆಂಗಳೂರು ಜ 28 : ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ(B S Yedyurappa) ಅವರ ಮೊಮ್ಮಗಳು ಸೌಂದರ್ಯ ಬೆಂಗಳೂರಿನ ವಸಂತ ನಗರದ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಸಿ.ಎಂ ಯಡಿಯೂರಪ್ಪನವರ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಅವರು ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇಂದು ಸೌಂದರ್ಯ ತಾವು ವಾಸವಿದ್ದ ಅಪಾರ್ಟ್ ಮೆಂಟ್ ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಮಲ್ಲಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಆದರೆ ಅಲ್ಲಿಗೆ ತಲುಪುವಷ್ಟರ ಹೊತ್ತಿಗೆ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.


2018ರಲ್ಲಿ ವೈದ್ಯ ನೀರಜ್ ಎಂಬುವವರನ್ನು ವಿವಾಹವಾಗಿದ್ದರು. ಸೌಂದರ್ಯಗೆ ಒಂದು ಮಗು ಕೂಡಾ ಇದೆ. ಬೌರಿಂಗ್ ಆಸ್ಪತ್ರೆಯಲ್ಲಿ ಸೌಂದರ್ಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ ಸಾವಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.
ಮೃತ ಸೌಂದರ್ಯ ಗರ್ಭಿಣಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರಕ್ಕೆ ಬಂದಿರಬಹುದು, 2018ರಲ್ಲಿ ಮದುವೆಯಾಗಿದ್ದ ಸೌಂದರ್ಯ ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು, ಅವರಿಗೆ ಈಗಾಗಲೇ 9 ತಿಂಗಳ ಮಗುವಿದೆ ಎಂದು ತಿಳಿದುಬಂದಿದೆ.

Exit mobile version