ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರು ಫೈನಲ್ : ಬೊಮ್ಮಾಯಿ ಘೋಷಣೆ!

bommai

ಶಿವಮೊಗ್ಗದಲ್ಲಿ(Shivmoga) ನಿರ್ಮಾಣವಾಗುತ್ತಿರುವ ದೇಶೀಯ ವಿಮಾನ ನಿಲ್ದಾಣಕ್ಕೆ(Airport) ಮಾಜಿ ಮುಖ್ಯಮಂತ್ರಿ(Former Chiefminister) ಬಿ.ಎಸ್ ಯಡಿಯೂರಪ್ಪನವರ(BS Yedurappa)ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ(ChiefMinister) ಬಸವರಾಜ್ ಬೊಮ್ಮಾಯಿ(Basavaraj Bommai) ಘೋಷಿಸಿದ್ದಾರೆ.

ಇನ್ನು ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್ ಯಡಿಯೂರಪ್ಪನವರ ಹೆಸರು ಇಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಈ ಶಿಫಾರಸನ್ನು ಕೇಂದ್ರಕ್ಕೆ ಕಳುಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ವೇಳೆ ತಿಳಿಸಿದರು. ಇನ್ನು ಬಿ.ಎಸ್ ಯಡಿಯೂರಪ್ಪನವರು ಹುಟ್ಟಿದ್ದು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಾದರೂ ಅವರ ರಾಜಕೀಯ ಜೀವನ ಶುರುವಾಗಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಉದ್ಯೋಗಕ್ಕಾಗಿ ವಲಸೆ ಬಂದ ಬಿ.ಎಸ್ ಯಡಿಯೂರಪ್ಪನವರು ಶಿಕಾರಿಪುರವನ್ನೇ ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡರು. ಶಿಕಾರಿಪುರದ ಪುರಸಭೆಯ ಸದಸ್ಯನಾಗಿ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ ಯಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಸಂಘಟಿಸಿದರು. ಕೇವಲ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ವಿಧಾನಸಭೆ ಪ್ರವೇಶಿಸಿದ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ತಂದು ನಿಲ್ಲಿಸಿದ ಶ್ರೇಯಸ್ಸು ಯಡಿಯೂರಪ್ಪನವರಿಗೆ ಸಲ್ಲುತ್ತದೆ.

ಮುಖ್ಯಮಂತ್ರಿಯಾದ ನಂತರ ಶಿವಮೊಗ್ಗ ಜಿಲ್ಲೆಯ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ರೂಪಿಸಿದ ಕೀರ್ತಿ ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಇನ್ನು ಶಿವಮೊಗ್ಗ ಜಿಲ್ಲೆ ‘ಚಳುವಳಿಗಳ ನಾಡು’ ಎಂದೇ ಗುರುತಿಸಿಕೊಂಡಿದೆ. ರೈತ ಚಳುವಳಿಗಳ ಮೂಲಕ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ ಯಡಿಯೂರಪ್ಪನವರ ಹೆಸರನ್ನು ಇದೀಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಡಲಾಗುತ್ತಿದೆ.

Exit mobile version