ವರುಣಾರ್ಭಟ: ತಮಿಳುನಾಡಿನಲ್ಲಿ ಮುಂದುವರಿದ ಭಾರಿ ಮಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Chennai: ಮಂಗಳವಾರವೂ ದಕ್ಷಿಣ ತಮಿಳುನಾಡಿನಲ್ಲಿ (Yellow Alert in Tamilnadu) ಭಾರೀ ಮಳೆ ಮುಂದುವರಿದಿದ್ದು, ಮಳೆ ಸಂಬಂಧಿತ ಅವಘಡಗಳಿಂದ ಮೂವರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿಗೆ (Kanyakumari, Tirunelveli, Thoothukudi and Tenkashi)

ಇಂದು ಭಾರತೀಯ ಹವಾಮಾನ (Yellow Alert in Tamilnadu) ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ (Puducherry and Karaikal) ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಐಎಂಡಿ ತಿಳಿಸಿದೆ.

ದಕ್ಷಿಣ ತಮಿಳುನಾಡಿನಲ್ಲಿ ಸುಮಾರು 39 ಪ್ರದೇಶಗಳು ಭಾರೀ ಮಳೆಗೆ ಸಾಕ್ಷಿಯಾಗಿದ್ದು, ಕೊಡೈಕೆನಾಲ್‌ನ ಸಿಲ್ವರ್ ಕ್ಯಾಸ್ಕೇಡ್ ಜಲಪಾತ (Silver Cascade Falls of Kodaikanal) ಭಾರೀ

ಮಳೆಯಿಂದಾಗಿ ಧುಮ್ಮಿಕ್ಕುತ್ತಿದೆ. ಜೊತೆಗೆ ಮಳೆಯಿಂದ ಡ್ಯಾಂಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬೀಡಲಾಗುತ್ತಿದೆ. ತೂತುಕುಡಿ ಪಟ್ಟಣದಲ್ಲಿ ಜನಜೀವನ ಅವ್ಯವ್ಯಸ್ತವಾಗಿದೆ.

ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಿಂದಾಗಿ ಭತ್ತದ ಗದ್ದೆಗಳು, ರಸ್ತೆಗಳು (Road) ಮತ್ತು ಸೇತುವೆಗಳು ಮುಳುಗಿವೆ ಮತ್ತು ಅನೇಕ ವಸತಿ ಕಾಲೋನಿಗಳು ಜಲಾವೃತಗೊಂಡಿವೆ. ಕೆರೆಗಳ ಕೋಡಿ

ಒಡೆದು ನೀರು ಹರಿದಿದೆ. ಪ್ರವಾಹದ ಪರಿಣಾಮ ಹಲವಾರು ಸ್ಥಳಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಮಳೆಯಿಂದಾಗಿ ವಿದ್ಯುತ್ ಪೂರೈಕೆಯನ್ನು ಮುಂಚಿತವಾಗಿ ಸ್ಥಗಿತಗೊಳಿಸಲಾಗಿದೆ. ಹಲವಾರು ಪ್ರದೇಶಗಳಲ್ಲಿ ಮೊಬೈಲ್ ಫೋನ್ (Mobile Phone) ಸಂಪರ್ಕಕ್ಕೆ ಅಡ್ಡಿಯಾಗಿದೆ. ಸಾರ್ವಜನಿಕ ಸಾರಿಗೆ

ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆಯ ಪ್ರಕಾರ ಗಂಟೆಗೆ 40-45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಇದು ಗಂಟೆಗೆ 55 ಕಿಲೋಮೀಟರ್‌ಗಳವರೆಗೆ ವೇಗ

ಪಡೆದುಕೊಳ್ಳುವ ಸಾಧ್ಯತೆ ಇದೆ.

ದಕ್ಷಿಣ ತಮಿಳುನಾಡು ಕರಾವಳಿಯ ಮನ್ನಾರ್ ಕೊಲ್ಲಿ (Mannar Kolli), ಕೊಮೊರಿನ್ ಪ್ರದೇಶ, ಲಕ್ಷದ್ವೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ವ್ಯಾಪ್ತಿಯಲ್ಲಿ ಮೀನುಗಾರರು ಸಮುದ್ರಕ್ಕೆ

ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅತ್ತ ಕೊಡೈಕೆನಾಲ್‌ನ ಸಿಲ್ವರ್ ಕ್ಯಾಸ್ಕೇಡ್ ಜಲಪಾತ ಭಾರೀ ಮಳೆಯಿಂದಾಗಿ ಧುಮ್ಮಿಕ್ಕುತ್ತಿದೆ. ಜೊತೆಗೆ ಮಳೆಯಿಂದ ಡ್ಯಾಂಗಳು (Dam)

ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬೀಡಲಾಗುತ್ತಿದೆ. ತೂತುಕುಡಿ ಪಟ್ಟಣದಲ್ಲಿ ಜನಜೀವನ ಅವ್ಯವ್ಯಸ್ತವಾಗಿದೆ.

ಮಳೆಯಿಂದಾಗಿ ಜನರು ಪರದಾಡೋ ಪರಿಸ್ಥಿತಿ ನಿರ್ಮಾಣವಾಗಿದ್ದು, ಚೆನ್ನೈನ (Chennai) ರಸ್ತೆಯಲ್ಲಿ 2 ರಿಂದ 3 ಅಡಿಗಳಷ್ಟು ನೀರು ನಿಂತಿತ್ತು. ಇದರ ಪರಿಣಾಮವಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

ಕನ್ಯಾಕುಮಾರಿಯಲ್ಲಿ ಪ್ರವಾಹ ಪರಿಸ್ಥಿತಿಯೇ ನಿರ್ಮಾಣವಾಗಿದ್ದು, ನೂರಾರು ಅಂಗಡಿ, ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

ಭವ್ಯಶ್ರೀ ಆರ್ ಜೆ

Exit mobile version