ಯೆಲ್ಲೋ ಗ್ಯಾಂಗ್ಸ್’ಶೀರ್ಷಿಕೆ ಬಿಡುಗಡೆ

“ನನ್ನ ಜೊತೆಗೆ ಕೆಲಸ ಮಾಡದ ತಂಡ ಎನ್ನುವುದಕ್ಕಷ್ಟೇ ಅಲ್ಲ, ಜನರಿಗೆ ಇಷ್ಟವಾಗುವಂಥ ಚಿತ್ರ ಮಾಡಿರುವ ತಂಡದವರು ಎನ್ನುವ ಕಾರಣಕ್ಕೆ ಈ ಗ್ಯಾಂಗ್ ನನಗೆ ಇಷ್ಟ” ಎಂದಿದ್ದಾರೆ ನಿರ್ದೇಶಕ ಯೋಗರಾಜ್ ಭಟ್. ಅವರು `ಯೆಲ್ಲೋ ಗ್ಯಾಂಗ್’ ಎನ್ನುವ ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡಿ ಈ ಮಾತುಗಳನ್ನಾಡಿ ಶುಭ ಕೋರಿದ್ದಾರೆ.

ವಿಭಿನ್ನ ಸ್ಟುಡಿಯೊಸ್ ನಿರ್ಮಾಣದಲ್ಲಿ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿರುವ ಕ್ರೈಂ-ಥ್ರಿಲ್ಲರ್ ಕನ್ನಡ ಚಲನಚಿತ್ರವೇ ಯೆಲ್ಲೋ ಗ್ಯಾಂಗ್ಸ್’. ಎರಡು ಹಂತಗಳಲ್ಲಿ ಒಟ್ಟು 35 ದಿನಗಳ ಕಾಲ ನಡೆದ ಚಿತ್ರೀಕರಣವು ಸಂಪೂರ್ಣವಾಗಿ ಬೆಂಗಳೂರಿನಲ್ಲಿ ನಡೆದಿದೆ.

ಛಾಯಾಗ್ರಹಣವನ್ನು ಸುಜ್ಞಾನ್ ಅವರು ನಿರ್ವಹಿಸಿದ್ದಾರೆ. ಚಿತ್ರಕ್ಕೆ ರೋಹಿತ್ ಸೋವರ್ ಅವರ ಸಂಗೀತ, ಸುರೇಶ್ ಆರ್ಮುಗಂ ಅವರ ಸಂಕಲನ ಮತ್ತು ಪ್ರವೀಣ್ ಕುಮಾರ್ ಜಿ ಅವರ ಸಂಭಾಷಣೆ ಇದೆ. ಮನೋಜ್ ಪಿ, ಜಿ.ಎಂ.ಆರ್ ಕುಮಾರ್ (ಕೆವಿಜಿ) ಹಾಗೂ ಜೆ.ಎನ್.ವಿ, ಶಿವಮೊಗ್ಗ ಶಾಲೆಯ ಮಾಜಿ ವಿದ್ಯಾರ್ಥಿಗಳು ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.

ತಾರಾಗಣದಲ್ಲಿ ಬಲರಾಜ್ವಾಡಿ, ನಾಟ್ಯ ರಂಗ, ನವೀನ್ ದೇವಯ್ಯ, ಅರ್ಚನಾ ಕೊಟ್ಟಿಗೆ, ಸತ್ಯ ಉಮ್ಮತ್ತಾಲ್, ಪ್ರದೀಪ್ ಪೂಜಾರಿ, ವಿನೀತ್ ಕಟ್ಟಿ, ಮಲ್ಲಿಕಾರ್ಜುನ ದೇವರಮನೆ, ನಂದ ಗೋಪಾಲ್, ರವಿ ಗಜ ಜಿಗಣಿ, ನೀನಾಸಂ ದಯಾನಂದ್, ಸತ್ಯ ಬಿ.ಜಿ, ವಿಠ್ಠಲ್ ಪರೀಟ, ಅರುಣ್ ಕುಮಾರ್, ಶ್ರೀ ಹರ್ಷ, ಸಂಚಾರಿ ಮಧು, ಪ್ರವೀಣ್ ಕೆ.ಬಿ, ಪವನ್ ಕುಮಾರ್ ಕೆ ಮತ್ತು ಮುಂತಾದವರಿದ್ದಾರೆ.

ವಿಭಿನ್ನ ಸ್ಟುಡಿಯೊಸ್ ಸಾಮಾಜಿಕ ಜಾಲತಾಣಗಳಲ್ಲಿದಿ ಗ್ಯಾಂಗ್ಸ್ ಆರ್ ಹಿಯರ್’ ಎನ್ನುವ ಹೆಸರಲ್ಲಿ ಹ್ಯಾಶ್‌ಟ್ಯಾಗ್ ಮಾಡುವ ಮೂಲಕ ಶುರುವಾದ ಚಿತ್ರದ ಪ್ರಚಾರವು ತನ್ನ ವಿಭಿನ್ನ ಮಿನಿಮಲ್ ಪೋಸ್ಟ್‌ ಗಳಿಂದ ಸಾಕಷ್ಟು ಜನರ ಗಮನ ಸೆಳೆದಿತ್ತು.

ಚಿತ್ರದ ಪೋಸ್ಟರ್‌ಗಳು ಮತ್ತು ಮೋಶನ್ ಪೋಸ್ಟರ್ ವಿಡಿಯೊಗಳಿಗೆ ಚಿತ್ರ ರಸಿಕರಿಂದ ಅತ್ಯುತ್ತಮ ಪ್ರತಿಕ್ರಿಯೆಗಳು ಸಿಗುತ್ತಿವೆ.
ಪೋಸ್ಟ್ ಪ್ರೊಡಕ್ಷನ್ನಿನಲ್ಲಿರುವ ಚಲನಚಿತ್ರವು ಈಗ ಸೆನ್ಸಾರ್‌ಗೆ ಸಿದ್ಧವಾಗುತ್ತಿದೆ.

Latest News

ರಾಜಕೀಯ

“ಕಾಂಗ್ರೆಸ್ ಬಸ್‍ಗೆ ಎರಡು ಸ್ಟೇರಿಂಗ್” : ಸಚಿವ ಡಾ. ಸುಧಾಕರ್

“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್‍ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್‍ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.