ಅಂತಾರಾಷ್ಟ್ರೀಯ ಯೋಗ ದಿನ 2022 : “ಯೋಗವು ಜಾಗತಿಕ ಶಾಂತಿಯನ್ನು ಸೃಷ್ಟಿಸುತ್ತದೆ” : ಪ್ರಧಾನಿ ಮೋದಿ!

ಯೋಗವು(Yoga) ಜನರನ್ನು ಮತ್ತು ದೇಶಗಳನ್ನು ಸಂಪರ್ಕಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ಎಲ್ಲರಿಗೂ ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರು ಮಂಗಳವಾರ ಕರ್ನಾಟಕದ ರಾಜ್ಯದ ಸಾಂಸ್ಕೃತಿಕ ನಗರಿಯಾದ(Heritage City) ಮೈಸೂರು(Mysuru) ಅರಮನೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ(International Yoga Day) ಮುಖ್ಯ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಆಂತರಿಕ ಶಾಂತಿಯೊಂದಿಗೆ ಲಕ್ಷಾಂತರ ಜನರು ಜಾಗತಿಕ ಶಾಂತಿಯ ವಾತಾವರಣವನ್ನು ಸೃಷ್ಟಿಸುತ್ತಾರೆ ಎಂದು ಪ್ರಾರಂಭದ ಮುನ್ನ ಹೇಳಿದರು. “ಆಂತರಿಕ ಶಾಂತಿಯೊಂದಿಗೆ ಲಕ್ಷಾಂತರ ಜನರು ಜಾಗತಿಕ ಶಾಂತಿಯ(Global Peace) ವಾತಾವರಣವನ್ನು ಸೃಷ್ಟಿಸುತ್ತಾರೆ. ಯೋಗವು ಜನರನ್ನು ಮತ್ತು ದೇಶಗಳನ್ನು ಹೇಗೆ ಒಗ್ಗೂಡಿಸುತ್ತದೆ ಮತ್ತು ಯೋಗವು ನಮ್ಮೆಲ್ಲರ ಸಮಸ್ಯೆ ಪರಿಹಾರಕವಾಗುವುದು ಹೇಗೆ ಎಂದು ಪ್ರಧಾನಿ ಮೋದಿ ಹೇಳಿದರು. “ಈ ಇಡೀ ವಿಶ್ವವು ನಮ್ಮದೇ ದೇಹ ಮತ್ತು ಆತ್ಮದಿಂದ ಪ್ರಾರಂಭವಾಗುತ್ತದೆ.

ವಿಶ್ವವು ನಮ್ಮಿಂದಲೇ ಪ್ರಾರಂಭವಾಗುತ್ತದೆ ಮತ್ತು ಯೋಗವು ನಮ್ಮೊಳಗಿನ ಎಲ್ಲದರ ಬಗ್ಗೆ ಜಾಗೃತಗೊಳಿಸುತ್ತದೆ ಮತ್ತು ಅರಿವಿನ ಪ್ರಜ್ಞೆಯನ್ನು ನಿರ್ಮಿಸುತ್ತದೆ. ಯೋಗವು ನಮಗೆ ಶಾಂತಿಯನ್ನು ತರುತ್ತದೆ. ಯೋಗದಿಂದ ಶಾಂತಿಯು ಕೇವಲ ವ್ಯಕ್ತಿಗಳಿಗೆ ಅಲ್ಲ. ಯೋಗವು ನಮ್ಮ ಸಮಾಜಕ್ಕೆ ಶಾಂತಿಯನ್ನು ತರುತ್ತದೆ, ನಮ್ಮ ರಾಷ್ಟ್ರಗಳಿಗೆ ಮತ್ತು ಜಗತ್ತಿಗೆ ಶಾಂತಿಯನ್ನು ತರುತ್ತದೆ ಮತ್ತು ನಮ್ಮ ವಿಶ್ವಕ್ಕೆ ಶಾಂತಿಯನ್ನು ತರುತ್ತದೆ” ಎಂದು ಹೇಳಿದರು. ಕರ್ನಾಟಕದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸಹಸ್ರಾರು ಮಂದಿ ಯೋಗ ಮಾಡಲು ಪಾಲ್ಗೊಂಡಿದ್ದರು.

ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್, ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತಿತರರು ಉಪಸ್ಥಿತರಿದ್ದರು. 2015 ರಿಂದ, ಪ್ರತಿ ವರ್ಷ ಜೂನ್ 21 ರಂದು ವಿಶ್ವಾದ್ಯಂತ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಸರಳವಾಗಿ ವಿಶೇಷ ಥೀಮ್ “ಮಾನವೀಯತೆಗಾಗಿ ಯೋಗ”(Yoga For Humanity) ಅಡಿ ಆಚರಿಸಲಾಯಿತು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.