ಶನಿವಾರ ನಡೆದ ಉತ್ತರ ಪ್ರದೇಶದ(Uttarpradesh) ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ, ರಾಜ್ಯದಲ್ಲಿ ಉಚಿತ ಪಡಿತರ ಯೋಜನೆಯನ್ನು ಜೂನ್ 30, 2022 ಮೂರು ತಿಂಗಳ ಅವಧಿಯವರೆಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ(ChiefMinister) ಯೋಗಿ ಆದಿತ್ಯನಾಥ್(Yogi Adityanath) ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಶುಕ್ರವಾರ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರು ಕೈಗೊಂಡ ಮೊದಲ ನಿರ್ಧಾರ ಇದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮಾರ್ಚ್ 31 ರಿಂದ ಜೂನ್ 30 ರವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ. ಇದು ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಲಕ್ನೋದಲ್ಲಿ ಹೇಳಿದ್ದಾರೆ.
ಈ ಯೋಜನೆಯು ಪ್ರತಿ ಮನೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕೆಜಿಯಷ್ಟು ಆಹಾರ ಧಾನ್ಯವನ್ನು ಒದಗಿಸುತ್ತದೆ. ಕೋವಿಡ್ ಖಾಯಿಲೆಯೂ 2020 ರಲ್ಲಿ ಬಂದಾಗ, ಕೇಂದ್ರವು ಇದನ್ನು ಮೊದಲು ಜಾರಿಗೆ ತಂದಿತು ಎಂದು ಹೇಳಿದರು. ಶನಿವಾರದಂದು ಸಿಎಂ ಯೋಗಿ ಆದಿತ್ಯನಾಥ್ ಅವರು, ‘‘ಹೊಸ ಸಚಿವ ಸಂಪುಟದಲ್ಲಿ ಕೈಗೊಂಡ ಮೊದಲ ನಿರ್ಧಾರ ಇದಾಗಿದ್ದು, ಪಾರದರ್ಶಕವಾಗಿ ಜಾರಿಯಾಗಲಿದೆ.

ಶುಕ್ರವಾರ, ಮಾರ್ಚ್ 25 ರಂದು ಸತತ ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ಜನರು ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿಯನ್ನು ಮೆಚ್ಚಿ, ನಿಮ್ಮಿಂದ ಮತ್ತಷ್ಟು ಉತ್ತಮ ಕೆಲಸಗಳು ಮುಂದೆ ಬರಲಿ ಎಂದು ಹೇಳುತ್ತಿದ್ದಾರೆ.