ನೂಪುರ್ ಶರ್ಮಾ(Nupur Sharma) ಹೇಳಿಕೆ ಖಂಡಿಸಿ ದೇಶಾದ್ಯಂತ ಶುಕ್ರವಾರದ ಪ್ರಾರ್ಥನೆಯ ನಂತರ ಕಲ್ಲು ತೂರಾಟ ಮತ್ತು ಹಿಂಸಾಚಾರ ನಡೆದಿದೆ. ಜಮ್ಮುಕಾಶ್ಮೀರ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ, ತೆಲಂಗಾಣ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಅನೇಕ ಕಡೆ ಹಿಂಸಾಚಾರ ನಡೆದಿದೆ.

ಉತ್ತರಪ್ರದೇಶದಲ್ಲಿ(Uttarpradesh) ಅತಿ ಹೆಚ್ಚು ಹಿಂಸಾಚಾರ ನಡೆದಿದ್ದು ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ(Chiefminister) ಯೋಗಿ ಆದಿತ್ಯನಾಥ್(Yogi Adityanath) ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಗಲಭೆಕೋರರ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಕಲ್ಲುತೂರಾಟ ನಡೆಸಿದವರನ್ನು ಗುರುತಿಸಲಾಗಿದ್ದು ಅಂತವರ ಮನೆಗಳಿಗೆ ಬುಲ್ಡೋಜರ್ ನುಗ್ಗಿದೆ. ಶುಕ್ರವಾರ ಕಲ್ಲುತೂರಾಟ ನಡೆಸಿದವರ ಮನೆಗೆ ಶನಿವಾರವೇ ಬುಲ್ಡೋಜರ್ ನುಗ್ಗಿದ್ದು, ಉತ್ತರಪ್ರದೇಶದಾದ್ಯಂತ ಇನ್ನಷ್ಟು ಗಲಭೆಕೋರರನ್ನು ಪತ್ತೆ ಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಈ ನಡುವೆ ಶುಕ್ರವಾರ ರಾತ್ರಿಯೇ 109ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹಿಂಸಾಚಾರದ ಮಾಸ್ಟರ್‍ಮೈಂಡ್ ಜಾಫರ್ ಹಯಾತ್ ಹಶ್ಮಿ ಮತ್ತು ಆತನ ಸಹಾಯಕನ ಮನೆಯನ್ನು ಬುಲ್ಡೋಜರ್(Buldozer) ಬಳಸಿ ದ್ವಂಸ ಮಾಡಲಾಗಿದೆ. ಗಲಭೆಕೋರರ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಈ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸರಣಿ ಸಭೆಗಳನ್ನು ನಡೆಸಿದ್ದಾರೆ. ಉತ್ತರಪ್ರದೇಶದ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.