ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್.ಶರ್ಮಿಳಾರಿಂದ ಇಂದು ಹೊಸ ಪಕ್ಷ ಆರಂಭ

ಹೈದರಾಬಾದ್, ಜು. 08: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರು ಇಂದು ಹೊಸ ಪಕ್ಷವನ್ನು ಆರಂಭಿಸಲಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುವ ಖಾಸಗಿ ಸಮಾರಂಭದಲ್ಲಿ ರಾಜಕೀಯ ಪಕ್ಷಕ್ಕೆ ಚಾಲನೆ ಸಿಗಲಿದೆ. ಕೊವಿಡ್ -19 ಸಾಂಕ್ರಾಮಿಕ ರೋಗದ ನಡುವೆ ನಡೆಯಲಿರುವ ಸರಳ ಸಮಾರಂಭದಲ್ಲಿ ಶರ್ಮಿಳಾ ಅವರು ಪಕ್ಷದ ಕಾರ್ಯಸೂಚಿ ಮತ್ತು ಧ್ವಜವನ್ನು ಬಿಡುಗಡೆ ಮಾಡಲಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಜಗನ್ ಮೋಹನ್ ಮತ್ತು ಶರ್ಮಿಳಾ ಅವರ ತಂದೆ ಎಸ್ ರಾಜಶೇಖರ ರೆಡ್ಡಿ ಅವರ ಜನ್ಮ ದಿನಾಚರಣೆಯ ದಿನವೇ ಪಕ್ಷಕ್ಕೆ ಚಾಲನೆ ಲಭಿಸಲಿದೆ. ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷದ ನಿಷ್ಠಾವಂತರೊಂದಿಗೆ ತಾಯಿ ವೈ.ಎಸ್.ವಿಜಯಮ್ಮ ಹಾಜರಾಗಲಿದ್ದಾರೆ ಎಂದು ಮಾಧ್ಯಮಗಳ ವರದಿಗಳು ತಿಳಿಸಿವೆ.

Exit mobile version