ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ: ಆರೋಗ್ಯ ಇಲಾಖೆ ಹೈ ಅಲರ್ಟ್

ಚಿಕ್ಕಬಳ್ಳಾಪುರ (Zika Virus in Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಮಾರಕ ಜಿಕಾ ವೈರಸ್‌ (Zika Virus) ಪತ್ತೆಯಾಗಿದ್ದು,

ಈ ವೈರಸ್‌ ಪತ್ತೆಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಸಭೆ ನಡೆಸಿ, ವೈರಸ್‌ ಹರಡದಂತೆ ತಡೆಯಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜ್ವರ, ತಲೆನೋವು,

ಕಣ್ಣು ಕೆಂಪಾಗುವಿಕೆ, ಕೀಲು ಮತ್ತು ಸ್ನಾಯು ನೋವು ಕಾಣಿಸಿಕೊಳ್ಳುತ್ತದೆ. ಇನ್ನು ಬಹುತೇಕ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ..

ಸೊಳ್ಳೆಗಳ ರಕ್ತದಲ್ಲಿ ಜಿಕಾ ವೈರಸ್ ಪತ್ತೆಯಾಗಿರುವ ಹಿನ್ನಲೆ ಆರೋಗ್ಯ ಇಲಾಖೆ ಹೈ ಅಲರ್ಟ್ (High Alert) ಘೋಷಿಸಿದ್ದು, ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ಹಲವೆಡೆ

ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು (Zika Virus in Chikkaballapur) ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿನ 68 ಕಡೆಗಳಲ್ಲಿ ಸೊಳ್ಳೆಗಳನ್ನು ಹಿಡಿದು ಅವುಗಳಲ್ಲಿ ಮಾರಣಾಂತಿಕ ವೈರಸ್‌ ಇದೆಯೇ ಎಂದು ಪರಿಣತರು ಪರೀಕ್ಷೆ ನಡೆಸಿದ್ದರು. ಅದರಂತೆ ಚಿಕ್ಕಬಳ್ಳಾಪುರದ ಆರು ಪ್ರದೇಶಗಳಲ್ಲಿಯು

ಕೂಡ ಸೊಳ್ಳೆಗಳನ್ನು ಹಿಡಿದು ಪರೀಕ್ಷಿಸಲಾಗಿದ್ದು, ಸದ್ಯ ಶಿಡ್ಲಘಟ್ಟ (Shidlaghatta) ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಮಾರಕ ವೈರಸ್‌ ಪತ್ತೆಯಾಗಿದೆ. ಇನ್ನು ಆರೋಗ್ಯ ಇಲಾಖೆ

ಅಧಿಕಾರಿಗಳು, ಮಾರಕ ವೈರಸ್‌ (Virus) ಪತ್ತೆಯಾಗುತ್ತಿದ್ದಂತೆ ವಿಶೇಷ ಸಭೆ ನಡೆಸಿ ವೈರಸ್‌ ಹರಡದಂತೆ ತಡೆಯಬೇಕಾದ ಕ್ರಮಗಳ ಬಗ್ಗೆ ಚರ್ಚ ನಡೆಸಿದ್ದಾರೆ.

ಜಿಕಾ ವೈರಸ್
ಜಿಕಾ ಎಂಬುದು ಒಂದು ವೈರಸ್ ಸೋಂಕಾಗಿದ್ದು, ಡೆಂಗೀ (Dengue), ಚಿಕೂನ್‌ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಜಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ಸೊಳ್ಳೆಗಳು

ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಅಲ್ಲಲ್ಲಿ ನಿಂತಿರುವ ನೀರು ಈ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ.

ಈ ವೈರಸ್ ಲಕ್ಷಣಗಳು
ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಕೀಲು ಮತ್ತು ಸ್ನಾಯು ನೋವು ಕಾಣಿಸಿಕೊಳ್ಳುವುದಲ್ಲದೆ ಇನ್ನು ಬಹುತೇಕ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ.

ಜ್ವರಪೀಡಿತ 7 ಮಂದಿಗೆ ರಕ್ತ ಪರೀಕ್ಷೆ
ಜಿಕಾ ವೈರಸ್ ಪತ್ತೆಯಾದ ತಲಕಾಯಲಬೆಟ್ಟದಿಂದ 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ (Venkatapura), ದಿಬ್ಬೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು

ಭೇಟಿ ನೀಡಿ 30 ಗರ್ಭಿಣಿಯರು ಮತ್ತು ಜ್ವರಪೀಡಿತ 7 ಮಂದಿಯ ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ.

ಇದನ್ನು ಓದಿ: ರೈತರಿಗೆ ʼ ಟ್ರಾನ್ಸ್ಫರ್ಮರ್ ಶಾಕ್ʼ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರ ; ಕಂಗಾಲಾದ ರೈತರು..!

Exit mobile version